ಹಚ್ಚೇವು ಕನ್ನಡದ ದೀಪ
ಕರುನಾಡ ದೀಪ ಸಿರಿನುಡಿಯ ದೀಪ
ಒಲವೆತ್ತಿ ತೋರುವ ದೀಪ ಹಚ್ಚೇವು
ಬಹುದಿನಗಳಿಂದ ಮೈಮರೆವೆಯಿಂದ
ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸ-
ಲಲ್ಲಲ್ಲಿ ಕರಣ ಚಾಚೇವು
ನಡು ನಾಡೆ ಇರಲಿ, ಗಡಿನಾಡೆ ಇರಲಿ
ಕನ್ನಡದ ಕಳೆಯ ಕೆಚ್ಚೇವು
ಮರೇತೇವು ಮರವ, ತರದೇವು ಮನವ, ಎರದೇವು ಒಲವ ಹಿಡಿ ನೆನಪ
ನರನರವನೆಲ್ಲ ಹುರಿಗೊಳಿಸಿ, ಹೊಸೆದು ಹಚ್ಚೇವು ಕನ್ನಡದ ದೀಪ
ಕಲ್ಪನೆಯ ಕಣ್ಣು ಹರಿವನಕ ಸಾಲು
ದೀಪಗಳ ಬೆಳಕ ಬೀರೇವು
ಹಚ್ಚಿರುವ ದೀಪದಲಿ ತಾಯ ರೂಪ
ಅಚ್ಚಳಿಯದಂತೆ ತೋರೇವು
ಒಡಲೊಳ\ಡಲ ಕೆಚ್ಚಿನಾ ಕಿಡಿಗಳನ್ನು
ಗಡಿನಾಡಿನಾಚೆ ತೊರೇವು
ಹಮ್ಮಿರಲು ಪ್ರೀತಿ ಎಲ್ಲಿಯದು ಭೀತಿ? - ನಾಡೊಲವೆ ನೀತಿ ಹಿಡಿ ನೆನಪ
ಮನೆಮನೆಗಳಲ್ಲಿ ಮನಮನಗಳಲ್ಲಿ ಹಚ್ಚೇವು ಕನ್ನಡದ ದೀಪ.
ಕರುನಾಡಿನರಿವ ನೆರೆತೀವಿ ಭಾವದಲಿ
ಜೀವನಾಡಿ ನುಡಿಸೇವು
ತೆರೆತೆರೆದ ಕಣ್ಣಿನಲಿ ನೇಹವೆರೆದು
ನವ ಜ್ಯೋತಿಯನ್ನೆ ಮುಡಿಸೇವು
ನಮ್ಮನ್ನವುಂಡು ಅನ್ಯಾಯಗೈಯು-
ವಂಥವರ ಹುಚ್ಷಬಿಡಿಸೇವು
ಇಹುದೆಮಗೆ ಛಲವು, ಕನ್ನಡದ ಬಲವು ಕನ್ನಡದ ಒಲವು ಹಿಡಿನೆನವು
ನಮ್ಮೆದೆಯ ಕೆಚ್ಚುನಿಚ್ವುಗಳನೂಡಿ ಹಚ್ಚೇವು ಕನ್ನಡದ ದೀಪ.
ನಮ್ಮವರು ಗಳಿಸಿದಾ ಹೆಸರ ಉಳಿಸ-
ಲೆಲ್ಲಾರು ಒಂದುಗೂಡೇವು
ನಮ್ಮೆದೆಯ ಮಿಡಿಯುವೀ ಮಾತಿನಲ್ಲಿ
ಮಾತೆಯನು ಪೂಜೆ ಮಾಡೇವು
ನಮ್ಮುಸಿರು ತೀಡುವೀ ನಾಡಿನಲ್ಲಿ
ಮಾಂಗಲ್ಯಗೀತೆ ಹಾಡೇವು
ತೊರೆದೇವು ಮರುಳ, ಕಡದೇವು ಇರುಳ ಪಡದೇವು ತಿರುಳ ಹಿಡಿ ನೆನಪ
ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ ಹಚ್ಚೇವು ಕನ್ನಡದ ದೀಪ.
-ಡಿ.ಎಸ್.ಕರ್ಕಿ
0 Comments