ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೆ ಕೋಟಿ ರುಪಾಯಿ ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನು ಒಬ್ಬ ಸಿಪಾಯಿ
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ಹುಣ್ಣಿಮೆ ಹೋಳಿಗೆ ದೀಪ ಹೆಂಡತಿ ತವರಿಗೆ ಹೊರಡುವೆನೆಂದರೆ ನನಗಿಲ್ಲದ ಕೋಪ ಕೈ ಹಿಡಿದವಳು ಕೈ ಬಿಡದವಳು ಮಾಡಿದ ಅಡಿಗೆಯೆ ಚೆಂದ ನಾಗರ ಕುಚ್ಚಿನ ನಿಡುಜಡೆಯವಳು ಈಕೆ ಬಂದುದು ಎಲ್ಲಿಂದ?
ಕಬ್ಬಿಗನೂರಿಗೆ ದಾರಿಗಳಿದ್ದರೆ ಕನಸೇ ಇರಬೇಕು ಅಲ್ಲಿಯ ದೊರೆತನ ಸಿಗುವಂತಿದ್ದರೆ ನನಗೇ ಸಿಗಬೇಕು ತಾರೆಯ ಬೆಳಕಿನ ತುಂಬಿದ ಸಭೆಯಲಿ ಸುಂದರಿ ಮೆರೆದಾಳು ನನ್ನೊಡನವಳು ಸಿಂಹಾಸನದಲಿ ಮೆಲ್ಲನೆ ನಕ್ಕಾಳು
ಚಂದಿರನೂರಿನ ಅರಮನೆಯಿಂದ ಬಂದವರೀಗೆಲ್ಲಿ? ಬೆಳ್ಳಿಯ ಕೋಟೆಯ ಬಾಗಿಲಿನಿಂದ ಬಂದವರೀಗೆಲ್ಲಿ? ಹೆಂಡತಿಯೊಂದಿಗೆ ಬಡತನ ದೊರೆತನ ಏನೂ ಭಯವಿಲ್ಲ ಹೆಂಡತಿಯೊಲುಮೆಯ ಭಾಗ್ಯವನರಿಯದ ಗಂಡಿಗೆ ಜಯವಿಲ್ಲ
0 Comments