ನಗುವಾಗ ನಕ್ಕು ಅಳುವಾಗ ಅತ್ತು ಮುಗಿದಿತ್ತು ಅರ್ಧ ದಾರಿ ಹೂಬಳ್ಳಿಯಿಂದ ಹೆಮ್ಮರನ ಎದೆಗೆ ಬಿಳಿ ಬಿಳಿಯ ಹಕ್ಕಿ ಹಾರಿ||ಪ||
ನಸು ನಕ್ಕು ನಾಚಿ ನೀ ಬಳಿಗೆ ಬಂದೆ ಕೆಂಪಾದ ಹೂಗಳಲ್ಲಿ ಆ ಮೊದಲ ದಿನದ ಅದೆ ನಲಿವ ಕಂಡೆ ಹೂವೆದೆಯ ಹನಿಗಳಲ್ಲಿ ನಕ್ಷತ್ರ ಲೋಕ ತೆರೆದಿತ್ತು ಮೇಲೆ ಹೊಸ ಭಾವಗೀತೆಯಂತೆ ಎದೆಯಾಳದಿಂದ ತುಳುಕಿತ್ತು ಜ್ವಾಲೆ ಬಾಂದಳದ ಮಿಂಚಿನಂತೆ||ನಗುವಾಗ||
ಮೈ ಮೈಗೆ ಸೋಂಕಿ ಆಗಿತ್ತು ಸಂಜೆ ಹುಣ್ಣಿಮೆಯ ತಂಪಿನಲ್ಲಿ ನಾ ನಿನ್ನ ಕಂಡೆ ನಿನ್ನೊಲವ ಕಂಡೆ ಮಲ್ಲಿಗೆಯ ಕಂಪಿನಲ್ಲಿ ಓ ನನ್ನ ನಲ್ಲೆ ನಗುತಿರುವೆಯಲ್ಲೆ ನನ್ನೆದೆಯ ತುಂಬ ನೀನೆ ಈ ಕತ್ತಲೊಳಗೆ ಹುಡುಕುವುದು ಬೇಡ ಇಲ್ಲಿಹುದು ನಿನ್ನ ವೀಣೆ||ನಗುವಾಗ||
ನೀ ನುಡಿಸಿ ತೆರೆದ ಹೊಂಗನಿಸಲ್ಲಿ ನನಗಿರಲಿ ಒಂದು ತಾಣ ನಾ ಬಡವನಹುದು ಈಗೇನ ಕೊಡಲಿ ಈ ಮುತ್ತು ನನ್ನ ಪ್ರಾಣ||ನಗುವಾಗ||
0 Comments