Input license here

ಇತ್ತೀಚಿನ ಪೋಸ್ಟ್‌ಗಳು

ಬಣ್ಣದ ತಗಡಿನ ತುತ್ತೂರಿ-ಕವನ

 ಬಣ್ಣದ ತಗಡಿನ ತುತ್ತೂರಿ
ಕಾಸಿಗೆ ಕೊಂಡನು ಕಸ್ತೂರಿ

ಸ-ರಿ-ಗ-ಮ-ಪ-ದ-ನಿ-ಸ ಊದಿದನು
ಸ-ನಿ-ದ-ಪ-ಮ-ಗ-ರಿ-ಸ ಊದಿದನು

ತನಗೇ ತುತ್ತೂರಿ ಇದೆಯೆಂದ
ಬೇರಾರಿಗು ಅದು ಇಲ್ಲೆಂದ

ತುತ್ತೂರಿ ಊದುತ ಕೊಳದ ಬಳಿ
ಕಸ್ಥೂರಿ ನಡೆದನು ಸಂಜೆಯಲಿ
ಜಂಬದ ಕೋಳಿಯ ರೀತಿಯಲಿ

ಜಾರಿತು ನೀರಿಗೆ ತುತ್ತೂರಿ
ಗಂಟಲು ಕಟ್ಟಿತು ನೀರೂರಿ

ಸ-ರಿ-ಗ-ಮ ಊದಲು ನೋಡಿದನು
ಗ-ಗ-ಗ-ಗ ಸದ್ದನು ಮಾಡಿದನು

ಬಣ್ಣವು ನೀರಿನ ಪಾಲಾಯ್ತು
ಜಂಬದ ಕೋಳಿಗೆ ಗೋಳಾಯ್ತು
                                                              -ಜಿ. ಪಿ. ರಾಜರತ್ನಂ

Post a Comment

0 Comments