ಜಯ್ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಜಯ್ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ |ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂಧನರವತರಿಸಿದ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ.
ಹಸುರಿನ ಗಿರಿಗಳ ಸಾಲೆ
ನಿನ್ನಯ ಕೊರಳಿನ ಮಾಲೆ,ಕಪಿಲ ಪತಂಜಲ ಗೌತಮ ಜಿನನುತ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಶಂಕರ ರಾಮಾನುಜ ವಿದ್ಯಾರಣ್ಯ
ಬಸವೇಶ್ವರ ಮಧ್ವರ ದಿವ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ
ಪಂಪ ಲಕುಮಿಪತಿ ಜನ್ನಕುಮಾರವ್ಯಾಸರ ಮಂಗಳಧಾಮ |
ಕವಿಕೋಗಿಲೆಗಳ ಪುಣ್ಯಾರಾಮ |
ನಾನಕ ರಾಮಾನಂದ ಕಬೀರರ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ತೈಲಪ ಹೊಯ್ಸಳರಾಳಿದ ನಾಡೆ,
ಡಂಕಣ ಜಕಣರ ನೆಚ್ಚಿನ ಬೀಡೆ;
ಕೃಷ್ಣ ಶರಾವತಿ ತುಂಗಾ
ಕಾವೇರಿಯ ವರರಂಗಾ.ಚೈತನ್ಯ ಪರಮಹಂಸ ವಿವೇಕರ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಸರ್ವ ಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ.
ಹಿಂದು ಕ್ರೈಸ್ರ ಮುಸಲ್ಮಾನ
ಪಾರಸಿಕ ಜೈನರುದ್ಯಾನ.ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ |ಕನ್ನಡ ನುಡಿ ಕುಣಿದಾಡುವ ಗೇಹ |
ಕನ್ನಡ ತಾಯಿಯ ಮಕ್ಕಳ ದೇಹ |
ಜಯ್ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಜಯ್ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ |-ರಾಷ್ಟ್ರಕವಿ ಕುವೆಂಪು.

0 Comments